
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 75 ಲಕ್ಷ ರೂ ವೆಚ್ಚದಲ್ಲಿ ಶ್ರೀ ಬಸವೇಶ್ವರ ಯಾತ್ರಿ ನಿವಾಸ ಹಾಗೂ ಅಲ್ಪಸಂಖ್ಯಾತರ ಯಾತ್ರಿ ನಿವಾಸ ಕಟ್ಟಡದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುದ್ದಲಿ ಪೂಜೆ ನೇರವೇರಿಸಿದರು.

ಬರುವ ದಿನಗಳಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಮಗ್ರ ಯೋಜನೆ ರೂಪಿಸುವುದಾಗಿ ಹೆಬ್ಬಾಳಕರ್ ಈ ವೇಳೆ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು,ಪಕ್ಷದ ಕಾರ್ಯಕರ್ತರು, ಗ್ರಾಮ ಪಂಚಾಯತ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.