Latest

ಮಾ.೧೫ ರಂದು ವಿಶ್ವ ಗ್ರಾಹಕರ ದಿನಾಚರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಮಾ.೧೫ ರಂದು ಬೆಳಗ್ಗೆ ೧೦.೩೦ಕ್ಕೆ ಗಂಟೆಗೆ ಕಣಬರಗಿ ರಸ್ತೆಯ ಭಾರತ ಕಾಲನಿಯ  ಮಹಿಳಾ ಕಲ್ಯಾಣ ಸಂಸ್ಥೆಯಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಆಯೋಜಿಸಲಾಗಿದೆ.
ಬೆಳಗಾವಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ಬಿ.ವ್ಹಿ. ಗುದ್ಲಿ ಕಾರ್ಯಕ್ರಮ ಉದ್ಘಾಟಿಸುವವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಹೆಚ್ಚುವರಿ ಅಧ್ಯಕ್ಷೆ ಎಚ್.ಡಿ. ಏಕತಾ ಅಧ್ಯಕ್ಷತೆ ವಹಿಸಲಿದ್ದು, ಇಂಡಿಯನ್ ಆಯಿಲ್ ಕಾರ್ಪೋರೇಶನ್ ಏರಿಯಾ ಆಫೀಸ್ ಸೀನಿಯರ್  ಮ್ಯಾನೇಜರ್ ಎಂ.ಎಸ್. ಜೋಶಿ ಉಪನ್ಯಾಸಕರಾಗಿ ಭಾಗವಹಿಸುವರು.

Related Articles

Back to top button