Latest

ಮುಂಡಗೋಡ: ಪ್ರತಿಭಟನೆ ವೇಳೆ ಮಹಿಳೆ ಸಾವು

   
   ಪ್ರಗತಿವಾಹಿನಿ ಸುದ್ದಿ, ಮುಂಡಗೋಡ
ಕಾರ್ಮಿಕ ಸಂಘಟನೆಗಳು ಕರೆನೀಡಿದ್ದ ಬಂದ್ ಸಂದರ್ಭದಲ್ಲಿ  ಪ್ರತಿಭಟನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾಳೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಘಟನೆ ನಡೆದಿದ್ದು,  ಶಾಂತಾ ಚಕ್ರಸಾಲಿ(೫೩) ಮೃತ ಮಹಿಳೆ. ಇವರು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಮಹಿಳೆಯಾಗಿದ್ದು, ಅಂಗನವಾಡಿಯಲ್ಲಿ ಆಯಾ ಆಗಿ ಕೆಲಸ ಮಾಡುತ್ತಿದ್ದಳು. ಭಾರತ್ ಬಂದ್ ಹಿನ್ನಲೆಯಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪಟ್ಟಣದ ತಾಲೂಕು ಪಂಚಾಯಿತಿ ಹತ್ತಿರ ಮೆರವಣಿಗೆ ಬರುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ.  ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿಯೇ ಮೃತಪಟ್ಟಿದ್ದಾರೆ.
ಸಿಪಿಐ ಶಿವಾನಂದ ಚಲವಾದಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button