*
ಪ್ರಗತಿವಾಹಿನಿ ಸುದ್ದಿ, ಮುಧೋಳ
ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಡಿಸ್ಟಿಲರಿ ಘಟಕದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದರು.
ನಿರಾಣಿ ಶುಗರ್ ಫ್ಯಾಕ್ಟರಿ ಯಲ್ಲಿ ಈ ಘಟನೆ ನಡೆದಿದೆ. ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.ಇದೊಂದು ಅತ್ಯಂತ ದುಃಖದ ಸಂಗತಿ.
ಮೃತರ ಆತ್ಮಕ್ಕೆ ಶಾಂತಿ ಕೋರುವೆ.ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತಾಗಬೇಕು.ಈ ಸಂಬಂಧ ನಾನು ಈಗಾಗಲೇ ಶಾಸಕರಾದ ಶ್ರೀ ಮುರುಗೇಶ್ ನಿರಾಣಿ ಅವರ ಜೊತೆ ಮಾತನಾಡಿದ್ದೇನೆ.
ದುರ್ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಕೂಡ ಸೂಚಿಸಿರುವೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ