Latest

ಮೃತ ಪ್ರಶಿಕ್ಷಣಾರ್ಥಿ ಪಿಎಸ್‍ಐಗೆ ಸಹೋದ್ಯೋಗಿಗಳ ನೆರವು: ಮುಖ್ಯಮಂತ್ರಿ ಶ್ಲಾಘನೆ

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
 ಕಲಬುರಗಿ ಪೊಲೀಸ್ ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿ ಬಸವರಾಜ ಶಂಕರಪ್ಪ ಮಂಚನೂರು ಅವರ ಆಕಸ್ಮಿಕ ನಿಧನ ಅತ್ಯಂತ ನೋವಿನ ಸಂಗತಿ. ಆದರೆ ಅವರ 590 ಸಹ ಪ್ರಶಿಕ್ಷಣಾರ್ಥಿಗಳು ತಲಾ 10 ಸಾವಿರ ರೂ. ಗಳಂತೆ ಮೃತರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಕಲಬುರಗಿ ಪೊಲೀಸ್ ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿಗಳು ಬಸವರಾಜ ಮಂಚನೂರು ಅವರು ಆಕಸ್ಮಿಕ ನಿಧನರಾದ ಹಿನ್ನೆಲೆಯಲ್ಲಿ ತಮ್ಮ ಗೆಳೆಯನಿಗೆ ನೆರವಾಗಲು ಮುಂದೆ ಬಂದಿರುವ ವಿಷಯ ತಿಳಿದು ಹೃದಯ ತುಂಬಿ ಬಂತು. ಅವರ ಔದಾರ್ಯ ಇತರರಿಗೆ ಮಾದರಿಯಾದುದು. ಇದಕ್ಕೆ ಪ್ರೇರಣೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಹಾಗೂ ತಮ್ಮ ಗೆಳೆಯ ಸಾವಿಗೆ ಮನಮಿಡಿದು ಸ್ಪಂದಿಸಿದ ಎಲ್ಲ ಪ್ರಶಿಕ್ಷಣಾರ್ಥಿಗಳಿಗೆ ಧನ್ಯವಾದಗಳು ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ನಿಯಮಾನುಸಾರ ಬಸವರಾಜ ಅವರಿಗೆ ನೀಡಬೇಕಾದ ಪರಿಹಾರಗಳನ್ನು ತ್ವರಿತವಾಗಿ ನೀಡುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button