Latest

ಮೇಕೆದಾಟು, ಮಹದಾಯಿ ಯೋಜನೆ; ದಿಲ್ಲಿಯಲ್ಲಿ ಕರ್ನಾಟಕ ಸಂಸದರ ಪ್ರದರ್ಶನ

 

   ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಮೇಕೆದಾಟು ಯೋಜನೆ ಸಂಬಂಧ ಕರ್ನಾಟಕದ ಸಂಸದರಿಂದ ಸಂಸತ್ ನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.
ಮೇಕೆದಾಟು ಹಾಗೂ ಮಹದಾಯಿ ಯೋಜನೆ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ಕರ್ನಾಟಕದ ಸಂಸದರು ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಗುರುವಾರ ಪ್ರದರ್ಶನ ನಡೆಸಿದ್ದಾರೆ.

 

ವಿದ್ಯುತ್ ಉತ್ಪಾದನೆ ಹಾಗೂ ಕುಡಿಯುವ ನೀರು ಪೂರೈಕೆ ಉದ್ದೇಶದ ಈ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಈ ಮೂಲಕ ರಾಜ್ಯದ ಎಲ್ಲ ಸಂಸದರು ಪಕ್ಷಭೇದ ಮರೆತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಅನಗತ್ಯವಾಗಿ ತಗಾದೆ ತೆಗೆಯುತ್ತಿದೆ. ರಾಜಕೀಯ ಕಾರಣಕ್ಕಾಗಿ ಈ ವಿಚಾರವನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂಬುದು ರಾಜ್ಯ ಸಂಸದರ ಇಂಗಿತ.

 

ರಾಜ್ಯದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಸಂಘಟಿಸಿರುವ ಈ ಪ್ರದರ್ಶನದಲ್ಲಿ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುತ್ತಿರುವ ಡಿ.ವಿ. ಸದಾನಂದಗೌಡ, ಅನಂತಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ ಸೇರಿದಂತೆ ಎಲ್ಲ ಸಂಸದರು ಭಾಗವಹಿಸಿದ್ದಾರೆ.

ಕಾಂಗ್ರೆಸ್ ನ ಪ್ರಕಾಶ ಹುಕ್ಕೇರಿ, ಡಿ.ಕೆ ಸುರೇಶ್, ಬಿ .ಕೆ ಹರಿಪ್ರಸಾದ್, ಜೈರಾಮ್ ರಮೇಶ್, ಬಿಜೆಪಿಯ ಸುರೇಶ ಅಂಗಡಿ,  ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಷಿ, ಬಿ.ವೈ ರಾಘವೇಂದ್ರ,  ಮತ್ತಿತರ ಸಂಸದರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button