Latest

ಮೇರು ನಟ ಲೋಕನಾಥ ನಿಧನ

     ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರಂಗಭೂಮಿ ಮತ್ತು ಚಲನಚಿತ್ರ ರಂಗದ ಹಿರಿಯ ನಟ  ಸಿ.ಎಚ್.ಲೋಕನಾಥ್  ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.
 1972ರಲ್ಲಿ ಕಲಾವಿದರಾಗಿ ರಂಗಭೂಮಿಗೆ ಬಂದ  ಅವರು ಸುಮಾರು 1000ಕ್ಕೂ ಹೆಚ್ಚು ಪ್ರದರ್ಶನಗಳಲ್ಲಿ ಭಾಗವಹಿಸಿದ್ದರು.  
ಸಂಸ್ಕಾರ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಲೋಕನಾಥ್, 650ಕ್ಕೂ ಹೆಚ್ಚು ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಗರಹಾವು, ಸಿಂಗಪುರದಲ್ಲಿ ರಾಜಾಕುಳ್ಳ, ಭೂತಯ್ಯನ ಮಗ ಅಯ್ಯು, ಮಿಂಚಿನ ಓಟ ಮುಂತಾದ ಪ್ರಮುಖ ಚಿತ್ರಗಳಲ್ಲಿ ಅಭಿನಯಿಸಿದ್ದರು.

ಓರ್ವ ಗಂಡು ಮತ್ತು ನಾಲ್ವರು ಹೆಣ್ಣು ಮಕ್ಕಳನ್ನು ಲೋಕನಾಥ್ ಅಗಲಿದ್ದಾರೆ. ರವೀಂದ್ರಕಲಾಕ್ಷೇತ್ರದ ಆವರಣದಲ್ಲಿ ಅವರ ಪಾರ್ಥಿವ  ಶರೀರವನ್ನು ಮಧ್ಯಾಹ್ನ 12 ಗಂಟೆಯಿಂದ 2:30 ರವರೆಗೆ ಸಾರ್ವಜನಿಕರ ದರ್ಶನಕ್ಕೆಇಡಲು ವ್ಯವಸ್ಥೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button