Kannada NewsKarnataka News
ಪ್ರವಾಹ ಸಂತ್ರಸ್ತರ ನಿಧಿಗೆ ಒಂದು ತಿಂಗಳ ವೇತನ ನೀಡಿದ ಅಧಿಕಾರಿ

ಪ್ರವಾಹ ಸಂತ್ರಸ್ತರ ನಿಧಿಗೆ ಒಂದು ತಿಂಗಳ ವೇತನ ನೀಡಿದ ಅಧಿಕಾರಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಹಲವಾರು ಜನರು ಮಿಡಿದಿದ್ದಾರೆ. ತಮ್ಮ ಕೈಲಾದ ಸಹಾಯ ನೀಡುತ್ತಿದ್ದಾರೆ.
ಹಾಗೆಯೇ ಬೆಳಗಾವಿಯ ಆಹಾರ ನಿರೀಕ್ಷಕ ಅಪ್ಜಲ್ ಬಾಗೋಜಿಕೊಪ್ಪ ತಮ್ಮ ಒಂದು ತಿಂಗಳ ವೇತನವನ್ನು ಪ್ರವಾಹ ಪರಿಹಾರ ನಿಧಿಗೆ ಅರ್ಪಿಸಿದ್ದಾರೆ.
ಇದರ ಚೆಕ್ ನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಬುಧವಾರ ಬೆಳಗ್ಗೆ ಸಲ್ಲಿಸಿದ್ದಾರೆ.
ಪ್ರವಾಹ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ನೀಡಿದ ಅಪ್ಜಲ್ ಅವರ ಮಾನವೀಯತೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಂತ್ರಸ್ತರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.




