CrimeKarnataka NewsLatest

*8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ವ್ಯಕ್ತಿಯಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ರಾಜ್ಯದಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ತಾಯಿಯಿಲ್ಲದ 8 ವರ್ಷದ ತಬ್ಬಲಿ ಮಗುವಿನ ಮೇಲೆ ಪಕ್ಕದ ಮನೆಯ 35 ವರ್ಷದ ವ್ಯಕ್ತಿ ನಂಬಿಸಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ.

ಧನರಾಜ್ ಕಾಂಬಳೆ ಅತ್ಯಾಚಾರ ಎಸಗಿರುವ ಆರೋಪಿ. ತಾಯಿಯನ್ನು ಕಳೆದುಕೊಂಡಿದ್ದ ಮಗಳನ್ನು ತಂದೆ ಒಬ್ಬಳನ್ನೇ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಧನರಾಜ್ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.

ಬಾಲಕಿಯನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button