Latest

ರಜನಿಕಾಂತ್​ ಬೆರಳಿಗೆ ಶಾಯಿ ಹಾಕಿದ ಚುನಾವಣಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ

ಚೆನ್ನೈ:
ನಿನ್ನೆ ನಡೆದ ಲೋಕಸಭಾ ಚುನಾವಣೆಯ ಮತದಾನ ವೇಳೆ ಸೂಪರ್​ಸ್ಟಾರ್​ ರಜನಿಕಾಂತ್​ ಅವರ ಬಲಗೈ ಬೆರಳಿಗೆ ಶಾಯಿ ಹಾಕಿದ ಚುನಾವಣಾ ಸಿಬ್ಬಂದಿ ಈಗ ಶಿಸ್ತುಕ್ರಮ ಎದುರಿಸಬೇಕಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಈ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಿತ್ತು. ಆದರೆ, ಗುರುವಾರ ಬೆಳಗ್ಗೆ ಚೆನ್ನೈನ ಸ್ಟೆಲ್ಲಾ ಮೇರಿಸ್​ ಕಾಲೇಜಿನಲ್ಲಿ ಮತ ಚಲಾಯಿಸಿದ ರಜನಿಕಾಂತ್​ ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದೆ.
ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಮಿಳುನಾಡು ರಾಜ್ಯ ಚುನಾವಣಾ ಆಯುಕ್ತ ಸತ್ಯಬಾತ್ರ ಸಾಹೋ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button