ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ನಾಗರಮುನ್ನೋಳಿ ಬಳಿ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಸಿಕಂದರ್ ಮುಲ್ತಾನಿ (28) ಸಾವಿಗೀಡಾದವರು. ಟ್ರಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಮುಲ್ತಾನಿ ಸ್ಥಳದಲ್ಲೆ ಸಾವಿಗೀಡಾದರು.
ಕಳೆದ 9 ವರ್ಷಗಳಿಂದ ಪಂಜಾಬಿನ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಆಫ್ ಸೆಂಟರ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
40 ದಿನ ರಜೆ ಪಡೆದು ಸಿಕಂದರ್ ಮುಲ್ತಾನಿ ಊರಿಗೆ ಬಂದಿದ್ದರು. ಚಿಕ್ಕೋಡಿ ತಾಲೂಕಿ ನಾಗರಮುನ್ನೋಳಿ ಗ್ರಾಮಕ್ಕೆ ಹೊಂದಿರುವ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಮೇಲೆ ಘಟನೆ ನಡೆದಿದೆ.
ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ