ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ರಮೇಶ ಜಾರಕಿಹೊಳಿ ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ, ನಾನು ಅವರ ಜೊತೆ ಮಾತನಾಡುತ್ತೇನೆ ಎಂದು ನೂತನ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿರುವ ಅವರು ಮಂಗಳವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಂಪುಟ ಪುನರ್ ರಚನೆ ನಂತರ ಅಸಮಾಧಾನ ಸಹಜ. ಆದರೆ ಯಾರೂ ರಾಜೀನಾಮೆ ನೀಡುವುದಿಲ್ಲ. ರಮೇಶ ಜಾರಕಿಹೊಳಿ ಜತಗೆ ಚರ್ಚೆ ಮಾಡುತ್ತೇವೆ. ಪಕ್ಷ ವರಿಷ್ಠರು ಸಹ ರಮೇಶ ಜಾರಕಿಹೊಳಿ ಜತೆಗೆ ಮಾತನಾಡಲಿದ್ದಾರೆ. ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬಿಳುವುದಿಲ್ಲ ಎಂದು ಅವರು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆ, ಸವಾಲು ಇದೆ. ಹಂತ ಹಂತವಾಗಿ ಪರಿಹಾರ ಮಾಡಲು ಯತ್ನಿಸುತ್ತೇನೆ. ಬೆಳಗಾವಿ ನಗರದ ಅಭಿವೃದ್ಧಿ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ ಎಂದ ಅವರು, ಖಾತೆ ಹಂಚಿಕೆ ನಾಳೆ ಅಂತಿಮಗೊಳ್ಳಲಿದ್ದು, ಯಾವುದು ಕೊಟ್ಟರು ನಿಭಾಯಿಸಲು ಸಿದ್ಧ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ