Latest

ರಾಜಾ ಲಖಮಗೌಡ ಕಾಲೇಜಿಗೆ ‘ದ್ವಿತೀಯ ಅತ್ಯುತ್ತಮ ಎನ್‌ಸಿಸಿ ಘಟಕ’ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ನಗರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ ಎನ್‌ಸಿಸಿ ವಾಯುದಳ ಘಟಕವು ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ವಲಯದಲ್ಲಿ ದ್ವಿತೀಯ ಅತ್ಯುತ್ತಮ ಎನ್‌ಸಿಸಿ ಘಟಕ ಪ್ರಶಸ್ತಿಗೆ ಭಾಜನವಾಗಿದೆ.
ಎನ್‌ಸಿಸಿ ಉಪಮಹಾನಿರ್ದೇಶಕರು ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯ ವತಿಯಿಂದ ಬೆಂಗಳೂರಿನ ಕ್ರೈಸ್ತ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಎನ್‌ಸಿಸಿ ಉಪಮಹಾನಿರ್ದೇಶಕ ಬ್ರಿಗೇಡಿಯರ್ ಡಿ.ಎಂ. ಪೂರ್ವಿಮಠ ವಿ.ಎಸ್.ಎಂ. ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯ ಬೆಂಗಳೂರು ಇವರು ಪ್ರಶಸ್ತಿ ಪ್ರದಾನ ಮಾಡಿದರು.
ಕೆಡೆಟ್ಸ್‌ಗಳ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು, ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರು, ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿ.ಡಿ. ಯಳಮಲಿ, ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಜಿ. ನಂಜಪ್ಪನವರ, ಸಿಬ್ಬಂದಿ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button