ದಕ್ಷಿಣ ಕರ್ನಾಟಕದಲ್ಲಿ ಏ.18ರಂದು, ಉತ್ತರ ಕರ್ನಾಟಕದಲ್ಲಿ ಏ.23ರಂದು ಮತದಾನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏ.18ರಂದು, ಉತ್ತರ ಕರ್ನಾಟಕದಲ್ಲಿ ಏ.23ರಂದು ಮತದಾನ ನಡೆಯಲಿದೆ.
ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಏ.23ರಂದು ಮತದಾನ ನಡೆಯುವುದು.
ಈ ಬಾರಿ ಅಭ್ಯರ್ಥಿಗಳ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಪತ್ರಿಕೆಗಳಿಗೆ ಮಾಹಿತಿ ನೀಡುವ ಜೊತೆಗೆ ರಾಜಕೀಯ ಪಕ್ಷಗಳು ತಮ್ಮ ವೆಬ್ ಸೈಟ್ ನಲ್ಲಿ ಸಹ ಪ್ರಕಟಿಸಬೇಕಾಗುತ್ತದೆ. 5 ಸಾವಿರ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲಾಗುತ್ತಿದೆ. ಒಬ್ಬ ಅಭ್ಯರ್ಥಿ 70 ಲಕ್ಷ ರೂ. ವೆಚ್ಚ ಮಾಡಬಹುದು. ಚುನಾವಣೆ ಖರ್ಚು ವೆಚ್ಚದ ಮೇಲೆ ನಿಗಾ ಇಡಲು ವಿಶೇಷ ತಂಡ ರಚಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣೆ ಆಯುಕ್ತರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 8.25 ಲಕ್ಷ ಹೊಸ ಮತದಾರರಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಆ್ಯಪ್ (ಸಿವಿಜಿಲ್) ಮಾಡಲಾಗಿದ್ದು, ಯಾರೇ ಇದರಲ್ಲಿ ಅಕ್ರಮಗಳನ್ನು ಹಾಕಿದರೆ ಹತ್ತಿರದ ಚುನಾವಣಾಧಿಕಾರಿಗೆ ಮಾಹಿತಿ ರವಾನೆಯಾಗಲಿದೆ. ಅವರು 15 ನಿಮಿಷದಲ್ಲಿ ಸ್ಥಳಕ್ಕೆ ತಲುಪಲಿದ್ದಾರೆ.
ರಾಜ್ಯದಲ್ಲಿ ಒಟ್ಟೂ 5.03 ಕೋಟಿ ಮತದಾರರು ಮತಚಲಾಯಿಸುವ ಹಕ್ಕು ಹೊಂದಿದ್ದಾರೆ. 58,126 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ವಿಕಲಚೇತನರಿಗೆ ಮನೆಯಿಂದ ಬರಲು ಹಾಗೂ ಹೋಗಲು ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. 600 ಮಹಿಳಾ ಮತಗಟ್ಟೆಗಳನ್ನು, 28 ವಿಕಲಚೇತನರೇ ನಡೆಸುವ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.
ಮೊದಲ ಹಂತದ ಮತದಾನ ನಡೆಯುವ ಸ್ಥಳಗಳಲ್ಲಿ ನಾಮಪತ್ರ ಸಲ್ಲಿಕೆ ಮಾರ್ಚ್ 19ರಿಂದ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 26 ಕೊನೆ ದಿನ. ನಾಮಪತ್ರಗಳ ಪರಿಶೀಲನೆ ಮಾರ್ಚ್ 27. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 29 ಕೊನೆ ದಿನ.
2ನೇ ಹಂತದ ಮತದಾನ ನಡೆಯುವ ಸ್ಥಳಗಳಲ್ಲಿ ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆ ದಿನ. ನಾಮಪತ್ರಗಳ ಪರಿಶೀಲನೆ ಏಪ್ರಿಲ್ 5. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ ಕೊನೆ ದಿನ ಏಪ್ರಿಲ್ 8.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ