
ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಿದೆ. ಅಕ್ಕಿ, ಬೇಳೆಕಾಳುಗಳು, ಹಾಲು, ಮೊಸರಿನ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ ನೀಡಿದೆ. ಸಾರಿಗೆ ಬಸ್ ಟಿಕೆಟ್ ದರ ಭಾರಿ ಏರಿಕೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದ ನಾಲ್ಕು ಸಾರಿಗೆ ಬಸ್ ಗಳ ಟಿಕೆಟ್ ದರ ಏರಿಕೆಯಾಗಿದ್ದು, ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಸುದ್ದಿಗೋಷ್ಥಿಯಲ್ಲಿ ತಿಳಿಸಿದ್ದಾರೆ.




