ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಮಿತ್ರ ಪಕ್ಷ ಬಿಜೆಪಿ ರಾಜ್ಯ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಿಹಿರಿಯೂರು ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ನಿಲ್ಲಿಸುವ ಯೋಚನೆಯಲ್ಲಿದ್ದ ನಾಯಕರಿಗೆ ಕುಮಾರ ಸ್ವಾಮಿ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ.
ನೇರವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಕುಮಾರಸ್ವಾಮಿ ಹಿರಿಯೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ನಿಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆ ಮತ್ತು ಹಿರಿಯೂರು ಉಪಚುನಾವಣೆ ಕುರಿತು ಅಮಿತ ಶಾ ಜೊತೆ ಮಾತನಾಡಿರುವುದಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇಇದರಿಂದಾಗಿ ಮೈತ್ರಿ ರಾಜಕೀಯ ತೀವ್ರ ಕುತೂಹಲ ಘಟ್ಟ ತಲುಪಿದೆ.
📍ನವದೆಹಲಿ
ರಾಷ್ಟ್ರದ ಗೌರವಾನ್ವಿತ ಗೃಹ ಸಚಿವರಾದ ಶ್ರೀ @AmitShah ಅವರನ್ನು ವಿಶ್ವಾಸಪೂರ್ವಕವಾಗಿ ಭೇಟಿಯಾಗಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸನ್ಮಾನ್ಯರು, ಹಿರಿಯೂರು ವಿಧಾನಸಭೆ ಉಪ ಚುನಾವಣೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಜತೆಗೆ, ಕರ್ನಾಟಕದಲ್ಲಿ #NDA ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸಿ ಮುಂಬರುವ ಚುನಾವಣೆಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುವ ನಿಟ್ಟಿನಲ್ಲಿ ಮತ್ತು ಜನರ ದನಿಯಾಗಿ ಮೈತ್ರಿಕೂಟವು ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಮಾನ್ಯರು ಮಾರ್ಗದರ್ಶನ ನೀಡಿದರು.
#NDAKarnataka
@BJP4India @JanataDal_S @BJP4Karnataka




