Latest

*ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್*: *ತುಟ್ಟಿಭತ್ಯೆ ಹೆಚ್ಚಳ*: *ಅಧಿಕೃತ ಆದೇಶ*

ಬೆಳಕಿನ ಹಬ್ಬ ದೀಪಾವಳಿ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ತುಟ್ಟಿ ಭತ್ಯೆ (Dearness Allowance) ದರವನ್ನು ಮೂಲ ವೇತನದ 15.75 ರಿಂದ 18% ಗೆ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2026ರ ಜುಲೈ 1 ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಜುಲೈ 1 ರಿಂದ ಜಾರಿಗೆ ಬರುವಂತೆ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಿ ಸರ್ಕಾರ ಆದೇಶಿಸಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್‌ ವೇತನ ಶ್ರೇಣಿಗಳಲ್ಲಿ ನಿವೃತ್ತರಾದ ನೌಕರರು ರಾಜ್ಯ ಪಿಂಚಣಿದಾರರಾಗುವುದರಿಂದ ಅವರಿಗೂ ಸಹ ಈ ಆದೇಶ ಅನ್ವಯಿಸುತ್ತದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿವಿಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ಇದು ಅನ್ವಯಿಸಲಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್‌ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜಿಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
Dearness Allowance,increase,state govt emplyees,karnataka

Related Articles

Back to top button