ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿಟಿಯು ಇತ್ತೀಚಿಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಆಲ್ ಇಂಡಿಯಾ ಅಂತರ ವಿಶ್ವವಿದ್ಯಾಲಯದ ಆಕ್ವಾಟಿಕ್ ಡೈವಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾರ್ಥಿನಿ ಋತುಜಾ ವಿಶ್ವಾಸ್ ಪವಾರ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ಜಿಐಟಿಯ ಇನ್ನೋರ್ವ ವಿದ್ಯಾರ್ಥಿ ಪ್ರಣವ್ ಹಲಗೇಕರ ವಿಟಿಯು ಆಯೋಜಿಸಿದ್ದ ಆಲ್ ಇಂಡಿಯಾ ಅಂತರ ವಿಶ್ವವಿದ್ಯಾಲಯದ ಆಕ್ವಾಟಿಕ್ ವಾಟರ್ ಪೋಲೊ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದರು.
ಕೆಎಲ್ಎಸ್ ಸಂಸ್ಥೆಯ ಕಾರ್ಯಧ್ಯಕ್ಷ ಎಂ. ಆರ್. ಕುಲಕರ್ಣಿ, ಜಿಐಟಿ ಆಡಳಿತ ಮಂಡಳಿಯ ಅಧ್ಯಕ್ಷ ಯು. ಎನ್. ಕಾಲಕುಂದ್ರಿಕರ್, ಪ್ರಾಚಾರ್ಯ ಡಾ. ಎ.ಎಸ್. ದೇಶಪಾಂಡೆ, ದೈಹಿಕ ಶಿಕ್ಷಣ ವಿಭಾಗದ ಚೇರಮನ್ ಪ್ರೊ. ರಮೇಶ ಮೇದಾರ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಪಿ.ವಿ. ಕಡಗದಕೈ, ಕ್ರಾಂತಿ ಕುರಣಕರ ಮತ್ತು ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇವರಿಬ್ಬರನ್ನು ಅಭಿನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ