Election NewsKannada NewsKarnataka NewsPolitics

*ಬಿಜೆಪಿಗೆ ಶಾಕ್: ಆನಂದ ಸಿಂಗ್ ಸಂಬಂಧಿ ಕವಿತಾ ಸಿಂಗ್ ಕಾಂಗ್ರೆಸ್ ಸೇರ್ಪಡೆ *

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಆನಂದ್ ಸಿಂಗ್ ಕುಟುಂಬದ ಸಂಬಂಧಿ ಕವಿತಾ ಸಿಂಗ್ ದಿಢೀರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದು, ಬಳ್ಳಾರಿ ಭಾಗದಲ್ಲಿ ಬಿಜೆಪಿಗೆ ದೊಡ್ಡ ಶಾಕ್ ಎದುರಾಗಿದೆ.‌

Home add -Advt

ಬಳ್ಳಾರಿ  ವಿಜಯನಗರ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ತುಕಾರಂ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.‌ ಬಿಜೆಪಿಯಲ್ಲಿ ಮೂಡಿದ ಅಸಮಾಧಾನದಿಂದ ಕವಿತಾ ಸಿಂಗ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ ಎನ್ನಲಾಗಿದೆ.‌ 

ಕಳೆದ ಹದಿನೈದು ವರ್ಷಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಕವಿತಾ ಸಿಂಗ್ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸೇರಿದ್ದಾರೆ.‌ ವಿಜಯನಗರದಲ್ಲಿ ಇನ್ನೂ ಕೆಲವು ಬಿಜೆಪಿ ಮುಖಂಡರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಲಾಗುತ್ತಿದೆ.

Related Articles

Back to top button