ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಶ್ರೀ ರೇಣುಕಾಚಾರ್ಯ ಜಯಂತಿ ನಿಮಿತ್ತ ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ರುದ್ರಪಠಣ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ಸೇರಿ ರುದ್ರ ಪಠಿಸಿದರು. ಇದೇ ವೇಳೆ ನಿಯತಿ ಫೌಂಡೇಶನ್ ಸಂಸ್ಥಾಪಕಿ ಡಾ.ಸೋನಾಲಿ ಸರ್ನೋಬತ್ ಅವರನ್ನು ಅವರ ಸಾಮಾಜಿಕ ಕಾರ್ಯಗಳಿಗಾಗಿ ಸತ್ಕರಿಸಲಾಯಿತು.