Latest

ಲಂಚ ಸ್ವೀಕರಿಸಿದ ಕಾನ್ ಸ್ಟೆಬಲ್ ಗೆ ಶಿಕ್ಷೆ, ದಂಡ

 

  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

2014ರಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಅನಿಲಕುಮಾರ ಭೀಮರಾವ ಮಾಲಗಾವಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 13 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ರಾಯಬಾಗ ತಾಲೂಕಿನ ಮಾವಿನಹೊಂಡದ (ಹಾಲಿ ಬೆಳಗಾವಿ ಹುಂಚ್ಯಾನಟ್ಟಿ) ಉದಯ ಸಿದ್ದಪ್ಪ ಮಾಂಗ ದೂರು ನೀಡಿದ್ದರು. ಅವರು ತಮ್ಮ ಗೆಳೆಯನ ವಿರುದ್ಧದ ಪ್ರಕರಣ ರದ್ಧುಪಡಿಸಲು ಬೇಡಿಕೆ ಇಟ್ಟಿದ್ದರು. ಇದಕ್ಕೆ 4 ಸಾವಿರ ರೂ. ಲಂಚ ಸ್ವೀಕರಿಸುವಾಗ ಅಂದಿನ ಲೋಕಾಯುಕ್ತ ಇನ್ ಸ್ಪೆಕ್ಟರ್ ಜೆ.ಎಂ.ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಧೀಶ ಶಶಿಧರ ಶೆಟ್ಟಿ ವಿಚಾರಣೆ ನಡೆಸಿ, ಶುಕ್ರವಾರ ತಪ್ಪಿತಸ್ಥರೆಂದು ತೀರ್ಪು ನೀಡಿ, ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 13 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿರುತ್ತಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕೆ.ಆರ್. ಎಕ್ಸಂಬಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button