ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣೆ ಆಯೋಗ ಚುರುಕಿನ ಪ್ರಕ್ರಿಯೆ ಆರಂಭಿಸಿದ್ದು, ಅಧಿಕಾರಿಗಳ ವರ್ಗಾವಣೆಗೆ ಡೆಡ್ ಲೈನ್ ಫಿಕ್ಸ್ ಮಾಡಿದೆ.
ಲೋಕಸಭಾ ಚುನಾವಣೆಗೆ ಎಲ್ಲ ಸಿದ್ಧತೆ ಮಾಡಲಾಗುತ್ತಿದ್ದು, ಈಗಾಗಲೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಂತ ಕಾರ್ಯಗಳೂ ನಡೆದಿವೆ.
ಇದೀಗ ಅಧಿಕಾರಿಗಳ ವರ್ಗಾವಣೆ ಸೂಚನೆ ನೀಡಲಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಸ್ವಂತ ಜಿಲ್ಲೆಯಲ್ಲಿದ್ದರೆ ಅಥವಾ ಕಳೆದ 3 ವರ್ಷಗಳಿಗಿಂತ ಹೆಚ್ಚಿನ ಅವಧಿಯಿಂದ ಆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರೆ ಅಂತವರನ್ನು ಫೆ.28ರೊಳಗೆ ವರ್ಗಾವಣೆಗೊಳಿಸಿ ಮಾರ್ಚ್ ಮೊದಲ ವಾರದೊಳಗೆ ವರದಿ ನೀಡುವಂತೆ ಆದೇಶಿಸಿದೆ.
ಹಾಗೆ ವರ್ಗಾವಣೆಗೊಳ್ಳುವ ಅಧಿಕಾರಿಗಳು ತಕ್ಷಣ ಹೊಸ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು. ತಮ್ಮನ್ನು ರಿಲೀವ್ ಮಾಡುವ ಅಧಿಕಾರಿ ಬರಬೇಕೆಂದು ಕಾಯಬಾರದು ಎಂದೂ ಸೂಚಿಸಲಾಗಿದೆ.
ಇದರಿಂದಾಗಿ ಮತ್ತೊಮ್ಮೆ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಹಾಗೆಯೇ ಲೋಕಸಭಾ ಚುನಾವಣೆ ಪ್ರಕ್ರಿಯೆಗೆ ಚುರುಕಿನ ಚಾಲನೆ ಸಿಕ್ಕಿದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ