Latest

ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಭೂ ಕಂಪನ


  ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಭಾನುವಾರ ಬೆಳಗಿನಜಾವ 2 ಗಂಟೆ ಹೊತ್ತಿಗೆ ಭೂ ಕಂಪನ ಉಂಟಾಗಿದೆ.

ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಯ ಪಾತ್ರೆಗಳೆಲ್ಲಾ ಅಲ್ಲಾಡಿದ ಅನುಭವವಾಗಿದೆ. ಯಡೂರು, ನಾಲೂರು ಗ್ರಾಪಂ ವ್ಯಾಪ್ತಿಯಲ್ಲಿ ಭಾರೀ ಶಬ್ದ ಸಹಿತ ಭೂಮಿ ಕಂಪಿಸಿದೆ. ಇದರಿಂದಾಗಿ ಸಹ್ಯಾದ್ರಿ ಪರ್ವತದ ತಪ್ಪಲಿನ ಜನ ಭಯಗೊಂಡಿದ್ದು, ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ರಿಕ್ಟರ್ ಮಾಪನದಲ್ಲಿ 2.2 ರಷ್ಟು ತೀವ್ರತೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಭೂಮಿ ಕಂಪಿಸಿದ್ದನ್ನು ದೃಢಪಡಿಸಿದ್ದು, ವಿಠಲನಗರ ಕೇಂದ್ರ ಸ್ಥಾನದಿಂದ ಮಾಣಿ ಜಲಾಶಯದ ಹಿನ್ನೀರು ವ್ಯಾಪ್ತಿಯ ಯಡೂರು, ಗಾರ್ಡರಗದ್ದೆ, ಶುಂಠಿಹಕ್ಲು, ಕರುಣಾಪುರ, ಹನಸ, ಮೇಗರವಳ್ಳಿ, ಸುಣ್ಣದಮನೆ, ಹಾಲಿಗೆ, ಡಿಂಡ ಗ್ರಾಮಗಳಲ್ಲಿ ಭೂಕಂಪನವಾಗಿದೆ ಎಂದು ದೃಢಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button