ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಜ್ಞಾನ ಸಂಗಮ ಆವರಣದಲ್ಲಿ ಸ್ಥಾಪಿಸಲಾಗಿರುವ ಜೈವಿಕ ಇಂಧನ ಘಟಕಕ್ಕೆ ಬೆಂಗಳೂರಿನ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಮನೋಜಕುಮಾರ ಶುಕ್ಲಾ ಶನಿವಾರ ಭೇಟಿ ನೀಡಿದರು. ವಿತಾವಿ ಮಾಹಿತಿ ಕೇಂದ್ರದ ವಿಶೇಷಾಧಿಕಾರಿ ಡಾ. ಚಿದಾನಂದ ಗವಿಮಠ, ಅರಣ್ಯ ಇಲಾಖೆಯ ಕಣಗಾರೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ