Latest

ವಿಟಿಯುದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಸಂಪನ್ನ

 

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

7 ದಿನಗಳ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆಯಿತು.

ಭಾರತ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಬೆಂಗಳೂರಿನ ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶನಾಲಯದ ಸಹಯೋಗದೊಂದಿಗೆ ಈ ಶಿಬಿರ ನಡೆಯಿತು.
ದೇಶದ ಹನ್ನೊಂದು ರಾಜ್ಯಗಳ ೨೧೦ ಎನ್ಎಸ್ಎಸ್ ಸ್ವಯಂ ಸೇವಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಗುರುವಾರ ಶಿಬಿರದ ಸಮಾರೋಪ ಸಮಾರಂಭ ಜರುಗಿತು. ಬೆಂಗಳೂರಿನ ಆಲ್ ಇಂಡಿಯಾ ಇನ್ಸ್‌ಟ್ಯೂಟ್ ಆಫ್ ಲೋಕಲ್ ಸೆಲ್ಪ್ ಗವರ್ನನಮೆಂಟ್ ಪ್ರಾದೇಶಿಕ ನಿರ್ದೇಶಕ ಅರುಣ ಪೂಜಾರ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಚಂದ್ರಶೇಖರ ಮುಖ್ಯ ಅತಿಥಿಗಳಾಗಿದ್ದರು. ವಿಟಿಯು ಪರೀಕ್ಷಾ ವಿಭಾಗದ ಕುಲಸಚಿವ ಡಾ. ಸತೀಶ ಅಣ್ಣಿಗೇರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಅರುಣ ಪೂಜಾರ ಮಾತನಾಡಿ, ನಮ್ಮ ಶಿಕ್ಷಣ ವ್ಯವಸ್ಥೆ ಬೋಧನೆ, ಸಂಶೋಧನೆ ಹಾಗೂ ಸಮಾಜ ಸೇವೆ ಎಂಬ ಮೂರು ಆಯಾಮಗಳನ್ನು ಹೊಂದಿದ್ದು, ಯುವ ವಿದ್ಯಾರ್ಥಿಗಳು ಸಮಾಜ ಸೇವೆಯ ತಮ್ಮ ಜವಾಬ್ದಾರಿಯನ್ನು ನಿರ್ಲಕ್ಷಿಸಬಾರದು ಎಂದರು. ಪ್ರೊ. ಚಂದ್ರಶೇಖರ ಮಾತನಾಡಿ, ಯುವಕರು ಜೀವನದಲ್ಲಿ ಶಾಂತಿ ಹಾಗೂ ನೆಮ್ಮದಿ ಸಾಧಿಸುವುದನ್ನು ತಮ್ಮ ಗುರಿಯಾಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಡಾ. ಸತೀಶ ಅಣ್ಣಿಗೇರಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ನೈತಿಕತೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಎನ್.ಎಸ್.ಎಸ್. ಪ್ರಾದೇಶಿಕ ನಿರ್ದೇಶನಾಲಯದ ಪ್ರಾದೇಶಿಕ ನಿರ್ದಶಕ ಕೆ. ವಿ. ಖಾದ್ರಿ ನರಸಿಂಹಯ್ಯ ಸ್ವಾಗತಿಸಿದರು. ವಿಟಿಯು ಎನ್ಎಸ್ಎಸ್ ಅಧಿಕಾರಿ ಡಾ. ಅಪ್ಪಾಸಾಬ ಎಲ್. ವಿ. ವಂದನಾರ್ಪಣೆ ಮಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button