ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಜನಸಾಮಾನ್ಯರನ್ನು ವಿಶೇಷವಾಗಿ ಯುವಕರ ಮನಸ್ಥಿತಿಯನ್ನು ತಪ್ಪು ಮಾರ್ಗದರ್ಶನ ಮಾಡುವ ಮೂಲಕ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ. ಇದನ್ನು ಹೋಗಲಾಡಿಸಲು ನಾಗರಿಕರಲ್ಲಿ ಸಮಗ್ರತೆ ಹಾಗೂ ಸಹೋದರತ್ವ ಮನೋಭಾವನೆ ಬೆಳೆಸಬೇಕಾದ ಅವಶ್ಯಕತೆ ಇದೆ ಎಂದು ವಿಟಿಯು ಕುಲಪತಿ ಡಾ. ಕರಿಸಿದ್ದಪ್ಪ ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಜ್ಞಾನ ಸಂಗಮದಲ್ಲಿ ಯುವ ಜನಾಂಗಕ್ಕೆ ಭಯೋತ್ಪಾದನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಭಯೋತ್ಪಾದನಾ ವಿರೋಧಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಟಿಯು ಪರೀಕ್ಷಾ ವಿಭಾಗದ ಕುಲಸಚಿವ ಹಾಗೂ ಪ್ರಭಾರಿ ಕುಲಸಚಿವ ಡಾ. ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಸ್ಥಾನಿಕ ಅಭಿಯಂತರ ಹೇಮಂತಕುಮಾರ, ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕರು, ಇತರ ವಿತಾವಿ ಅಧಿಕಾರಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಲಪತಿ ಡಾ. ಕರಿಸಿದ್ದಪ್ಪ ಪ್ರತಿಜ್ಞಾ ವಿಧಿ ಭೋದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ