ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿದ ಬಜೆಟ್‌ನಲ್ಲಿ ವಿಟಿಯು ವಿಭಜಿಸಿ ಹಾಸನದಲ್ಲಿ ತಾಂತ್ರಿಕ ವಿಶ್ವ ವಿದ್ಯಾಲಯ ಸ್ಥಾಪಿಸುವ ಘೋಷಣೆ ಮಾಡಿದ್ದು ಉತ್ತರ ಕರ್ನಾಟಕ ವಿರೋಧಿ ಭಾವನೆಯ ಪ್ರತೀಕವಾದ್ದು ಇದನ್ನು ಬಲವಾಗಿ ವಿರೋಧಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಬಜೆಟ್‌ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಕಾಲೇಜುಗಳ ಶಿಕ್ಷಕರ ಬಹುತೇಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರ ಬೆನ್ನು ತೋರಿಸಿದೆ. ಅನುದಾನ ವಿಸ್ತರಣೆ ಮಾಡದಿರುವುದು ಶಿಕ್ಷಕರಿಗೆ ಬಗೆದ ದ್ರೋಹ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಲ್ಪನಿಕ ವೇತನ ಬಡ್ತಿ ಸಮಸ್ಯೆಯನ್ನು ಪರಿಹರಿಸುವುದಾಗಿ ಮಾತು ಕೊಟ್ಟಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತು ತಪ್ಪಿದ ಮುಖ್ಯಮಂತ್ರಿಯಾಗಿದ್ದಾರೆ. ಕೃಷ್ಣಾ ಕೊಳ್ಳದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿಲ್ಲ. ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಿಸಲು ಬದ್ಧತೆ ತೋರದ ಇಂದಿನ ಬಜೆಟ್ ನಿಷ್ಪ್ರಯೋಜಕ ಬಜೆಟ್ ಆಗಿದೆ ಎಂದು ಅರುಣ ಶಹಾಪುರ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ