Kannada NewsKarnataka NewsLatestPolitics

*ಮಾಧ್ಯಮಗಳನ್ನು ನಿಂದಿಸಿ ಮತ್ತೊಂದು ವಿವಾದ ಸೃಷ್ಟಿಸಿದ ಸಂಸದ ಅನಂತ್ ಕುಮಾರ್ ಹೆಗಡೆ*

ಪ್ರಗತಿವಾಹಿನಿ ಸುದ್ದಿ: ಸಂವಿಧಾನ ತಿದ್ದುಪಡಿ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿರುವ ಸಂಸದ ಅನಂತ್ ಕುಮಾರ್ ಇದೀಗ ಮಾಧ್ಯಮಗಳನ್ನು ಅವಾಚ್ಯವಾಗಿ ನಿಂದಿಸಿ ಇನ್ನೊಂದು ವಿವಾದಕ್ಕೆ ಗುರಿಯಾಗಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗಡೆ ನೀಡಿದ್ದ ಸಂವಿದಾನ ಬದಲಾವಣೆ ಮಾಡಬೇಕು ಎಂಬ ಹೇಳಿಕೆ ಬಿಜೆಪಿಗೆ ತೀವ್ರ ಮುಜುಗರ ಉಂಟುಮಾಡಿದ್ದು, ಸ್ವಪಕ್ಷದ ನಾಯಕರೇ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರುತ್ತಿದ್ದಾರೆ. ಈ ನಡುವೆ ತಮ್ಮ ಮಾತಿಗೆ ತೇಪೆಹಚ್ಚಲು ಹೋಗಿ ಮಾಧ್ಯಮಗಳನ್ನೇ ನಿಂದಿಸುವ ಮೂಲಕ ಇನ್ನೊಂದು ಅವಾಂತರ ಸೃಷ್ಟಿಸಿದ್ದಾರೆ.

Home add -Advt

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಮಾಧ್ಯಮಗಳ ವಿರುದ್ದ ವಾಗ್ದಾಳಿ ನಡೆಸಿದ ಅನಂತ್ ಕುಮಾರ್ ಹೆಗಡೆ, ಅವಾಚ್ಯವಾಗಿ ನಿಂದಿಸಿದ್ದಾರೆ.

ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ್ರೆ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ. ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದ ಚರ್ಚೆ ಆಗಲಿ. ಆದ್ರೆ ನಿವೆಲ್ಲ ಇದಕ್ಕೆ ವಿಚಲಿತರಾಗಬಾರದು. ನೀವು ಯಾವದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಇರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಅನಂತ್ ಕುಮಾರ್ ಹೆಗಡೆಯವರ ಹೇಳಿಕೆಗಳು ವಿವಾದಗಳ ಜೊತೆಗೆ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

Related Articles

Back to top button