Latest

ಉತ್ತರ ಕನ್ನಡ, ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಜಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ನಗರ ಪರಿಷತ್ ಸ್ಥಾನ ಇದೀಗ ಬಿಜೆಪಿ ಪಾಲಾಗಿದೆ. ಬಿಜೆಪಿ ಅಭ್ಯರ್ಥಿ ಗೋಪಿನಾಥ್ ಕಾಂಗ್ರೆಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.

ಕಳೆದ ಬಾರಿ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಹೆ.ಎಸ್.ಗೋಪಿನಾಥ ರೆಡ್ಡಿ ಈ ಬಾಗಿ ಗೆದ್ದು ಬೀಗಿದ್ದಾರೆ. ಈ ಬಾರಿ ಕಾಂಗ್ರೆಸ್ ನಿಂದ ಕೋಟಿವೀರ ಎಂದೇ ಹೇಲಲಾಗುತ್ತಿದ್ದ ಕೆಜಿಎಫ್ ಬಾಬು ಸ್ಪರ್ಧಿಸಿದ್ದರು. ಕೆಜಿಎಫ್ ಬಾಬು ಗೆಲುವು ಖಚಿತ ಎಂದೇ ಬಿಂಬಿಸಲಾಗಿತ್ತು.

ಆದರೆ ಇದೀಗ ಕೆಜಿಎಫ್ ಬಾಬುಗೆ ಹಿನ್ನಡೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಗೋಪಿನಾಥ ರೆಡ್ಡಿ ವಿಜಯ ಸಾಧಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ್ದಾರೆ. ಅಲ್ಲಿ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಸೋಲುಂಡಿದ್ದಾರೆ.

Home add -Advt

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು

Related Articles

Back to top button