Latest

ಬೆಳಗಾವಿ ವಿಮಾನನಿಲ್ದಾಣಕ್ಕೆ ಚನ್ನಮ್ಮ ಹೆಸರು: ಕೇಂದ್ರಕ್ಕೆ ಮರುಪ್ರಸ್ತಾವನೆ -ಸಿಎಂ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿ ವಿಮಾನನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರಿಡುವ ಕುರಿತು ಕೇಂದ್ರ ಸರಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬಿಜೆಪಿಯ ಮಹಾಂತೇಶ ಕವಟಗಿಮಠ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಬೆಳಗಾವಿ ವಿಮಾನನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರಿಡಬೇಕೆನ್ನುವುದು ಬೆಳಗಾವಿ ಜನರ ಬಹುಕಾಲದ ಬೇಡಿಕೆಯಾಗಿದೆ. ಕೇಂದ್ರ ಮಾಜಿ ಸಚಿವ ಎಚ್.ಎನ್.ಅನಂತಕುಮಾರ ಕೂಡ ಈ ಬಗ್ಗೆ ಹೇಳಿಕೆ ನೀಡಿದ್ದರು. ಹಾಗಾಗಿ ಸರಕಾರ ಈ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕವಟಗಿಮಠ ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಕುಮಾರಸ್ವಾಮಿ, ಈಗಾಗಲೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಇದಕ್ಕೆ ಆರ್ಥಿಕ ವೆಚ್ಚವೇನೂ ಇರುವುದಿಲ್ಲ. ಹಾಗಾಗಿ ಮತ್ತೊಮ್ಮೆ ಪ್ರಸ್ತಾವನೆಯನ್ನು ಕಳುಹಿಸಲಾವುದು. ಖುದ್ದಾಗಿ ಕೇಂದ್ರವಿಮಾನಯಾನ ಸಚಿವರೊಂದಿಗೂ ಮಾತನಾಡಲಾಗುವುದು ಎಂದು ತಿಳಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button