ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ವಿವಿಧ ಇಲಾಖೆಗಳ ಬಜೆಟ್ ಪೂರ್ವ ಸಭೆ ಆರಂಭಿಸಿದ್ದು, ಕೆ.ಪಿ.ಸಿ ಕಚೇರಿಯಲ್ಲಿ ಕಾರ್ಮಿಕ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ 2019- 2020 ನೇ ಸಾಲಿನ ಆಯವ್ಯಯದ ಪೂರ್ವಭಾವಿ ಚರ್ಚೆ ನಡೆಸಿದರು.
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಂಬಂಧಿಸಿದ ಇಲಾಖೆಯ ಸಚಿವರು, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿ ಗಳ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಪ್ರಗತಿ ಪರಿಶೀಲನೆ ಹಾಗೂ ಮುಂದಿನ ವರ್ಷದ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿದರು.