Kannada NewsKarnataka NewsLatest

ವಿಶೇಷ ಗ್ರಾಮಸಭೆ: ಕೊರೋನಾ ವಾರಿಯರ್ಸ್ ಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು –  ಕಿತ್ತೂರು ಮತ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ  ಹಾಗೂ ಬಿಜೆಪಿ ಕಿತ್ತೂರ ಮಂಡಳ ಅಧ್ಯಕ್ಷ ಬಸವರಾಜ ಪರವನ್ನವರ ಅವರಾದಿ ಗ್ರಾಮದಲ್ಲಿ ಪ್ರಧಾನಮಂತ್ರಿ ಜಲ್ ಜೀವನ್ ಮಿಷನ್ ಯೋಜನೆಯಡಿ ಹಮ್ಮಿಕೊಂಡ ವಿಶೇಷ ಗ್ರಾಮಸಭೆಯಲ್ಲಿ ಪಾಲ್ಗೊಂಡು ಜನರ ಸಮಸ್ಯೆಗಳನ್ನು ಆಲಿಸಿದರು.
 ಯೋಜನೆ ಯಶಸ್ವಿಯಾಗುವಂತೆ ಕಾರ್ಯನಿರ್ವಹಿಸಬೇಕೆಂದು ವಿನಂತಿಸಿದರು. ಈ ಭೀಕರ ಕೋರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾ.ಪಂ ಸಿಬ್ಬಂದಿಗೆ ಕಿತ್ತೂರು ಮಂಡಳ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಪರವಾಗಿ ಸನ್ಮಾನಿಸಿ ಅಭಿನಂದನಾ ಪತ್ರ ಸಲ್ಲಿಸಿ ಗೌರವಿಸಲಾಯಿತು.
 ಕಾರ್ಯಕ್ರಮದಲ್ಲಿ ಕಿತ್ತೂರ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಭಾಸ ಸಂಪಗಾಂವಿ, ಗ್ರಾ.ಕು.ನೀ & ನೈ ವಿಭಾಗದ ಎಇಇ ಎಚ್.ಕೆ ವಂಟಗೋಡಿ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Back to top button