ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಣ ಶಕ್ತಿ ಯೋಜನೆಗೆ ಸಾರಿಗೆ ಇಲಾಖೆ ಕೊಂಚ ಬ್ರೇಕ್ ಹಾಕಲು ಮುಂದಾಗಿದೆ.
ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ ಮಹಿಳೆಯರ ಬಸ್ ಪ್ರಯಾಣ ಗಣನೀಯವಾಗಿ ಹೆಚ್ಚಾಗಿದೆ. ಉಚಿತ ಪ್ರಯಾಣದ ಸೌಲಭ್ಯದಿಂದಾಗಿ ಬಸ್ಗಳಲ್ಲಿ ನಿಗದಿತ ಸಂಖ್ಯೆಯನ್ನು ಮೀರಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳು ಸಾರಿಗೆ ಇಲಾಖೆಯ ಗಮನಕ್ಕೆ ಬಂದಿವೆ. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಹೊಸ ಆದೇಶ ಜಾರಿಗೊಳಿಸಿದೆ.
ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇನ್ಮುಂದೆ ಬಸ್ಗಳಲ್ಲಿ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಬೇಕು ಎಂದು ಸೂಚನೆ ನೀಡಿದೆ.
ರಾಜ್ಯದಲ್ಲಿ ಸಂಚರಿಸುವ ಎಲ್ಲ ಮಾದರಿಯ ಸಾರಿಗೆ ವಾಹನಗಳಲ್ಲಿ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಬೇಕು. ಈ ಕುರಿತು ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಲಾಗಿದೆ.
ಹೊಸ ನಿಯಮದ ಕುರಿತು ಪ್ರಯಾಣಿಕರಲ್ಲಿ ಅರಿವು ಮೂಡಿಸುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ನಿಯಮ ಜಾರಿಯಾದರೆ ಬಸ್ಗಳಲ್ಲಿ ಪ್ರಯಾಣಿಸುವ ಪುರುಷರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
Shakti scheme,free bus,transport department,new ruls,buses carry passengers per seating capacity




