ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಅಳಿಯನೇ ಮಾವನಿಗೆ ಚಾಕುವಿನಿಂದ ಇರಿದ ಘಟನೆ ಇಲ್ಲಿಯ ಶನಿವಾರ ಖೂಟದ ಬಳಿ ಶನಿವಾರ ಸಂಜೆ ನಡೆದಿದೆ.
ಸಣ್ಣದಾಗಿ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಇರಿತ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ.