ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿದರು.
ನೂತನ ಕೊಠಡಿಗಳನ್ನು ಕಟ್ಟುವ ಸಲುವಾಗಿ ಒಟ್ಟೂ10.60 ಲಕ್ಷ ರೂ. ಮಂಜೂರಾಗಿದ್ದು, ಹೆಬ್ಬಾಳಕರ್ ಗುದ್ದಲಿ ಪೂಜೆಯೊಂದಿಗೆ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸ್ಥಲೀಯ ಜನಪ್ರತಿನಿಧಿಗಳು ಇದ್ದರು.