Latest

ಶಾಸಕಿ ಅಂಜಲಿ ನಿಂಬಾಳ್ಕರ್ ಚೇತರಿಕೆ: ಇಂದು ಆಸ್ಪತ್ರೆಯಿಂದ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಸೊಲ್ಲಾಪುರ (ಮಹಾರಾಷ್ಟ್ರ)

ಭೀಕರ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಆರೋಗ್ಯದಲ್ಲಿ ಚೇತರಿಕೆಯಾಗಿದೆ.

ಸೊಲ್ಲಾಪುರದ ಗಂಗಾಮಾಯಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಲೆಗೆ ಏಟು ಬಿದ್ದಿರುವ ಹಿನ್ನೆಲೆಯಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇಡಲಾಗಿತ್ತು. ಆದರೆ ಒಳಭಾಗದಲ್ಲಿ ಪೆಟ್ಟು ಬಿದ್ದಿಲ್ಲವಾದ್ದರಿಂದ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಅಂಜಲಿ ಅವರ ತಲೆಯ ಬಲಭಾಗದಲ್ಲಿ ಹೊಲಿಗೆ ಹಾಕಲಾಗಿದೆ. ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಖಾನಾಪುರದಿಂದ ಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ಮಹಾರಾಷ್ಟ್ರದ ನಾಂದೇಡಕ್ಕೆ ತೆರಳುವಾಗ ಅಂಜಲಿ ಅವರವಕಾರು ಬೇರೊಂದು ವಾಹನಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮೂರು ಪಲ್ಟಿಯಾಗಿ ಕಾರು ನುಜ್ಜುಗುಜ್ಜಾಗಿದೆ.

ಕಾರು ಚಾಲಕ ಮತ್ತು ಗನ್ ಮ್ಯಾನ್ ಕೂಡ ಗಾಯಗೊಂಡಿದ್ದಾರೆ.

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ; ತಲೆಗೆ ಗಾಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button