
ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ FIR ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಗಂಭೀರ ಆರೋಪ ಅವರ ಮೇಲಿದೆ.



