ಪ್ರಗತಿವಾಹಿನಿ ಸುದ್ದಿ, ತುಮಕೂರು
ಕುಣಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೆ ಇಬ್ಬರು ಬಲಿಯಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ.
ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ಮೂತ್ರ ವಿಸರ್ಜನೆಗೆ ಹೋಗಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಕಾರು ಶಾಸಕ ಸಿ.ಟಿ.ರವಿಗೆ ಸೇರಿದ್ದೆನ್ನಲಾಗಿದೆ. ಆದರೆ ಅವರು ಕಾರು ಚಲಾಯಿಸುತ್ತಿರಲಿಲ್ಲ.
ಸುಮಾರು 12 ಯುವಕರು ಪ್ರವಾಸ ಮುಗಿಸಿಕೊಂಡು ಮರಳುತ್ತಿದ್ದರು. ಇಂದು ಬೆಳಗಿನಜಾವ ಅವರು ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿಕೊಂಡಿದ್ದರು. ಈ ವೇಳೆ ಘಟನೆ ನಡೆದಿದೆ.
ಸಿ.ಟಿ.ರವಿ ಪೊಲೀಸರಿಗೆ ಮಾಹಿತಿ ನೀಡಿ ಅಲ್ಲಿಂದ ತೆರಳಿದರೆನ್ನಲಾಗಿದೆ.