ಪ್ರಗತಿ ಮೀಡಿಯಾ ಹೌಸ್, ಬೆಳಗಾವಿ
ಕೃಷ್ಣಾ ನದಿ ಬತ್ತಿರುವುದರಿಂದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಪ್ರದೇಶದಲ್ಲಿ ನೀರಿಗೆ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ಶೀಘ್ರವೇ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ನೇತೃತ್ವದಲ್ಲಿ ಈ ಭಾಗದ ಶಾಸಕರ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕೊಂಡೊಯ್ಯಲಾಗುವುದು ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾತೇಶ ಕವಟಗಿಮಠ ತಿಳಸಿದ್ದಾರೆ.
ಶನಿವಾರ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ ಅವರನ್ನು ಭೇಟಿಯಾದ ಕವಟಗಿಮಠ ಪರಿಸ್ಥಿತಿಯನ್ನು ವಿವರಿಸಿದರು. ರಾಜ್ಯ ಸರಕಾರದಿಂದ ಮಹಾರಾಷ್ಟ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಲ್ಲಿನ ಕಾರ್ಯದರ್ಶಿ ಕಡವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ ಎಂದು ವಿಜಯ ಭಾಸ್ಕರ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿ ಮಾಡಿ ಕಡತಕ್ಕೆ ಅನುಮೋದನೆ ನೀಡುವಂತೆ ಒತ್ತಾಯಿಸಲಾಗುವುದು ಎಂದು ಕವಟಗಿಮಠ ತಿಳಿಸಿದ್ದಾರೆ.
ಕೊಯ್ನಾದಿಂದ ನೀರು: ಮಹಾ ಸಿಎಂಗೆ ವೆಂಕಯ್ಯ ನಾಯ್ಡು ಸೂಚನೆ -ಕೋರೆ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ