ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಶುಕ್ರವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ಸಭೆ ಕರೆದಿದ್ದು, ಉಪಮುಖ್ಯಮಂತ್ರಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಜರಿರುತ್ತಾರೆ.
ಸಭೆಗೆ ಹಾಜರಾತಿ ಕಡ್ಡಾಯವಾಗಿದೆ. ಗೈರಾದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.
ಗೈರಾದರೆ ಸ್ವಇಚ್ಛೆಯಿಂದ ಪಕ್ಷ ತ್ಯಜಿಸಲಿ ಬಯಸಿದ್ದಾರೆಂದು ಪರಿಗಣಿಸಿ, ಪಕ್ಷಾಂತರ ವಿರೋಧಿ ಕಾಯ್ದೆ ಅನ್ವಯ ಕ್ಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ