ಪ್ರಗತಿವಾಹಿನಿ ಸುದ್ದಿ, ತುಮಕೂರು
ತುಮಕೂರಿನ ಸಿದ್ದಗಂಗಾಮಠದ ಶಿವಕುಮಾರ ಸ್ವಾಮಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಾವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡೋಣ ಎಂದು ಗೃಹಸಚಿವ ಎಂ.ಬಿ.ಪಾಟೀಲ ಹೇಳಿದರು.
ಆರೋಗ್ಯದಲ್ಲಿ ನಿನ್ನೆ ರಾತ್ರಿಯಿಂದ ಏರುಪೇರಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಜೀವನ ಕೊಟ್ಟಂತಹ ಸ್ವಾಮಿಗಳಿಗೆ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿದರು.
ವಿಐಪಿಗಳು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಿನ್ನೆಲೆಯಲ್ಲಿ ನಾವು ಬಂದೋಬಸ್ತಿನ ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದ ಅವರು, ಮಾಧ್ಯಮಗಳ ಯಾವುದೇ ಪ್ರಶ್ನೆಗಳಿಗೆ ಅವಕಾಶ ನೀಡದೆ ಹೊರಟುಹೋದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ