
ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಗೆ ಜ.10ರಂದು ವಿನಯ್ ಗುರೂಜಿ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ವಿನಯ್ ಗುರೂಜಿ ಕಾರ್ಯಕ್ರಮಗಳ ಪಟ್ಟಿ ಹೀಗಿದೆ.
ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ವಿನಯ ಗುರೂಜಿ ಜ.10 ಶುಕ್ರವಾರ ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ಆಗಮಿಸುವರು.
8.30ಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ ನೀಡಲಿದ್ದಾರೆ. 10 ಗಂಟೆಗೆ ಹುಕ್ಕೇರಿ ಹಿರೇಮಠದ ಗುರುಕುಲದ ವೇದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 12 ಗಂಟೆಗೆ ಹುಕ್ಕೇರಿಯ ಮಹಾವೀರ ಶಿಕ್ಷಣ ಸಂಸ್ಥೆಗೆ ಭೇಟಿ ನೀಡುವರು. ಮಧ್ಯಾಹ್ನ 2 ಗಂಟೆಗೆ ಹುಕ್ಕೇರಿಯ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಗೆ ಭೇಟಿ ನೀಡುವರು. ಸಂಜೆ 4ಕ್ಕೆ ಗುರುಶಾಂತೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ಜರುಗುವ 2025ನೇ ಹುಕ್ಕೇರಿಯ ಉತ್ಸವದಲ್ಲಿ ಭಾಗಿಯಾಗಿ ಸಾಧಕರಿಗೆ ಸನ್ಮಾನಿಸುವರು.
ಜ.11 ರಂದು ಬೆಳಗ್ಗೆ 9 ಗಂಟೆಗೆ ಅಥಣಿ ಶಿವಯೋಗಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 10ಗಂಟೆಗೆ ಅಥಣಿ ಮೋಟಗಿಮಠದ ಶತಮಾನೋತ್ಸವದಲ್ಲಿ ಭಾಗಿಯಾಗುವರು. ಸಂಜೆ 6ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಅವದೂತ ವಿನಯ ಗುರೂಜಿ ಗೌರಿಗದ್ದೆ ಟ್ರಸ್ಟಿ ಅರುಣಕುಮಾರ ಎಚ್.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.