Belagavi NewsBelgaum NewsKannada NewsKarnataka NewsNationalPolitics

*ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ಕೆಎಲ್ಇ ಹಾಗೂ ಬಿಮ್ಸ್ ಆಸ್ಪತ್ರೆಯ ತರಬೇತಿ ನಿರತ ವೈದ್ಯರು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗಾವಿ ಬಿಮ್ಸ್ ಆವರಣದಿಂದ ಪ್ರತಿಭಟನಾ ರ್ಯಾಲಿ ಆರಂಭವಾಯಿತು. ಬಳಿಕ ಚೆನ್ನಮ್ಮ ವೃತ್ತ ಮಾರ್ಗವಾಗಿ ಬಂದ ಪ್ರತಿಭಟನಾ ನಿರತ ತರಬೇತಿ ವೈದ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಘೋಷಣೆ ಕೂಗುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.‌

ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಡಾ. ಅನನ್ಯ ಅವರು, ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.‌ ಇಂತಹ ನೀಚ ಕೃತ್ಯ ಎಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೂ ಬೆಳಗಾವಿಯಲ್ಲಿ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.‌

ಈ ಸಂದರ್ಭದಲ್ಲಿ ಬಿಮ್ಸ್ ಹಾಗೂ ಕೆಎಲ್ಇ ಆಸ್ಪತ್ರೆಯ ತರಬೇತಿ ನಿರತ ನೂರಾರು ವೈದ್ಯರು ಉಪಸ್ಥಿತರಿದ್ದರು.

Home add -Advt

Related Articles

Back to top button