Latest

ಸಧ್ಯದಲ್ಲೇ 52 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ನೇಮಕ : ಜಯಮಾಲಾ


   ಪ್ರಗತಿವಾಹಿನಿ ಸುದ್ದಿ, ಸುವರ್ಣ ವಿಧಾನ ಸೌಧ, ಬೆಳಗಾವಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ೫೨ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿಗೆ ಪ್ರಕ್ರಿಯೆ ಚಾಲನೆ ದೊರೆತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಡಾ. ಜಯಮಾಲಾ ಅವರು ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಖಾಲಿ ಇರುವ ಹುದ್ದೆಗಳಿಗೆ ಅಧಿಕಾರಿಗಳನ್ನು ಪ್ರಭಾರದಲ್ಲಿ ಇರಿಸಿರುವ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಕುಂಠಿತವಾಗಿಲ್ಲ ಎಂದು ಹೇಳಿದರು.
ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ೫೯,೨೯೬ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತಿದ್ದಾರೆ. ಅಪೌಷ್ಠಿಕತೆ ನಿವಾರಣೆಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ೯೫.೪೯ ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಶಾಸಕ ಶಿವನಗೌಡ ನಾಯಕ್ ಅವರ ಪ್ರಶ್ನೆಗೆ ಜಯಮಾಲಾ ಅವರು ಉತ್ತರಿಸಿದರು.
ಅನುದಾನ ಬಿಡುಗಡೆ : ಅಂಗನವಾಡಿ ಶಿಕ್ಷಕರಿಗೆ ಖಾಯಂಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲ ಎಂದು ಹೇಳಿದ ಅವರು ಈಗಾಗಲೇ ನೀಡಿರುವ ಭರವಸೆಯಂತೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ ೨೩೭ ಕೋಟಿ ರೂ ಅನುದಾನವನ್ನೂ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು.

Home add -Advt

Related Articles

Back to top button