ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದ ರಾಮತೀರ್ಥ ನಗರದ ಸಮುದಾಯ ಭವನದ ಅಡುಗೆ ಕೋಣೆ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಗೆ ಸಂಸದ ಸುರೇಶ ಅಂಗಡಿ ಹಾಗೂ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆ, ರಾಮತೀರ್ಥ ನಗರದ ಸಮುದಾಯ ಭವನದಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ. ಹೀಗಾಗಿ ಜನರ ಅನುಕೂಲಕ್ಕಾಗಿ ಸಮುದಾಯ ಭವನದ ಹಿಂದೆ ಅಡುಗೆ ಕೋಣೆ ಹಾಗೂ ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಸುಸಜ್ಜಿತವಾಗಿ ಅಡುಗೆ ಕೋಣೆ ಹಾಗೂ ಶೌಚಾಲಯಗಳನ್ನುನಿರ್ಮಾಣ ಮಾಡಲಾಗುತ್ತಿದೆ ಎಂದರು.
ಎನ್.ಬಿ. ನಿರ್ವಾಣಿ, ರಾಮತೀರ್ಥ ನಗರದ ಮುಖಂಡರು, ಗುತ್ತಿಗೆದಾರ ಹಾಗೂ ರಹಿವಾಸಿಗಳು ಉಪಸ್ಥಿತರಿದ್ದರು.