ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಪಕ್ಷೇತರ ಶಾಸಕರಿಬ್ಬರು ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಮತ್ತು ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ. ರಾಜ್ಯಪಾಲರಿಗೆ ಈ ಕುರಿತು ಸಲ್ಲಿಸಲು ತಾವು ಸಿದ್ಧಪಡಿಸಿರುವ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಸಂಪುಟ ಪುನಾರಚನೆ ವೇಳೆ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈ ಬಿಡಲಾಗಿತ್ತು.
ಇದೀಗ ರಾಜ್ಯ ರಾಜಕಾರಣ ಮತ್ತೊಂದು ತಿರುವು ಪಡೆದಿದ್ದು, ಸಂಜೆಯ ಹೊತ್ತಿಗೆ ಮತ್ತೇನು ಬೆಳವಣಿಗೆಯಾಗುತ್ತದೆಯೋ ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ