ನಗರದ ಲಕ್ಷ್ಮಿ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾಮಠದಲ್ಲಿ ಇದೇ 29 ರಂದು ಮಧ್ಯಾಹ್ನ 2 ಗಂಟೆಗೆ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಸಿಂದಗಿ ಸಾರಂಗಮಠದ ಶ್ರೀ ಪ್ರಭುಸಾರಂಗದೇವ ಶಿವಾಚಾರ್ಯ ಮಹಾಸ್ವಾಮಿಗಳನ್ನು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಗೌರವಿಸಿ ಸನ್ಮಾನಿಸಲಿದ್ದಾರೆ.
ಸಿಂದಗಿ ಶ್ರೀಗಳು ಸರಳತೆಯ ಮೇರುಪರ್ವತ ದಂತಿದ್ದು, ಶಿಕ್ಷಣ ಸಂಸ್ಥೆಗಾಗಿ ತಮ್ಮ ಮಠವನ್ನು ಸಮರ್ಪಣೆ ಮಾಡಿಕೊಂಡಿದ್ದಾರೆ.
ಆ ಭಾಗದಲ್ಲಿ ಜನಪರ ಕಾರ್ಯಗಳನ್ನು ಮಾಡುವುದರ ಜೊತೆ ಜೊತೆಗೆ ಪುಸ್ತಕದ ಕ್ರಾಂತಿ ಮಾಡಿ ನೂರಾರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ಇವರಿಗೆ ಗೌರವ ಡಾಕ್ಟರೇಟ್ ಪದವಿ ಲಭಿಸಿರುವುದು ಅತೀವ ಅಭಿಮಾನದ ಸಂಗತಿ ಎಂದು ಹುಕ್ಕೇರಿ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ