Latest

ಸೇವ್ ವಿಟಿಯು: ಶನಿವಾರ ಬೆಳಗ್ಗೆ 9.30ಕ್ಕೆ ಜಾಥಾ

ಸ್ವಯಂ ಪ್ರೇರಣೆಯಿಂದ ಭಾಗವಹಿಸಲು ಸಂಘಟಕರ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ವಿರೋಧಿಸಿ ಶನಿವಾರ ಬೆಳಗ್ಗೆ ಬೆಳಗಾವಿಯಲ್ಲಿ ಬೃಹತ್ ಜಾಥಾ ನಡೆಯಲಿದೆ.

Home add -Advt

ಬೆಳಗ್ಗೆ 9.30ಕ್ಕೆ ಬೋಗಾರ್ ವೇಸ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಲಾಗುವುದು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಯುವುದು. ಜಿಲ್ಲಾ ಉಸ್ತುವಾರಿ ಸಚಿವರು,  ಸಂಸದರು, ಶಾಸಕರು ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಜನಪ್ರತಿನಿಧಿಗಳು, ಮಠಾಧೀಶರು, ಸಂಘ ಸಂಸ್ಥೆಗಳು,  ವಿದ್ಯಾರ್ಥಿಗಳು, ಉದ್ಯಮಿಗಳು ಹಾಗೂ ಎಲ್ಲ ನಾಗರಿಕರು ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿ ಜಿಲ್ಲೆ ಹಾಗೂ ಉತ್ತರ ಕರ್ನಾಟಕದ ಎಲ್ಲ ನಾಗರಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

Related Articles

Back to top button