ಶಾಸಕ ಗಣೇಶ ಅಮಾನತು
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಈಗಲ್ಟನ್ ರೆಸಾರ್ಟ್ ನಲ್ಲಿ ತಮ್ಮದೇ ಪಕ್ಷದ ಕಂಪ್ಲಿ ಶಾಸಕ ಗಣೇಶ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆನಂದ ಸಿಂಗ್ ಅವರ ಫೋಟೋಗಳು ಬಹಿರಂವಾಗಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಅವರು ಆಸ್ಪತ್ರೆಯ ಬೆಡ್ ಮೇಲಿರುವ ಫೋಟೋ ಹರಿದಾಡುತ್ತಿದ್ದು, ಕಣ್ಣು, ಮುಖ ಊದಿಕೊಂಡಿವೆ. ಫೋಟೋ ನೋಡಿದರೆ ಅವರ ಮೇಲೆ ನಡೆದ ಹಲ್ಲೆಯ ಗಂಭೀರತೆ ಅರ್ಥವಾಗುವಂತಿದೆ.
ಈ ಮಧ್ಯೆ ಶಾಸಕ ಗಣೇಶ ಅವರನ್ನು ಕಾಂಗ್ರೆಸ್ ನಿಂದ ಅಮಾನತುಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲು ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಕೆ.ಜೆ.ಜಾರ್ಜ್ ಹಾಗೂ ಕೃಷ್ಣ ಭೈರೇಗೌಡ ನೇತೃತ್ವದ ಸಮಿತಿ ರಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ