ಹಾರಂಗಿ ಜಲಕ್ರೀಡಾ ಕೇಂದ್ರದಲ್ಲಿ ಭೀಕರ ದುರಂತ ಸಂಭವಿಸಿದೆ. ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.
ಪ್ರವಾಸಕ್ಕೆ ಬಂದಿದ್ದ ಕುಟುಂಬ ಹಾರಂಗಿ ಹಿನ್ನೀರಿನಲ್ಲಿ ಬೋಟ್ನಲ್ಲಿ ವಿಹಾರ ಮಾಡುತ್ತಿದ್ದ ವೇಳೆ ಏಕಾಏಕಿ ಬೋಟ್ ಪಲ್ಟಿಯಾಗಿದೆ. ದಂಪತಿ ಮ್ರಿತಪಟ್ಟಿದ್ದಾರೆ. ಇಬ್ಬರು ಮಕ್ಕಳನು ರಕ್ಷಿಸಲಾಗಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ, ಗುಜರಾತ್ ಮೂಲದ ದಂಪತಿ ಮೃತ ದುರ್ದೈವಿಗಳು.
ಗುಜರಾತ್ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಹಾರಂಗಿ ಹಿನ್ನೀರಿನಲ್ಲಿ ವಿಹಾರಕ್ಕೆ ಹೋಗಿದ್ದಾಗ ಬೋಟ್ ವೇಗವಾಗಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮಗುಚಿದೆ. ಬೋಟ್ನಲ್ಲಿದ್ದ ನಾಲ್ವರು ಪ್ರವಾಸಿಗರು ಲೈಫ್ ಜಾಕೆಟ್ ಧರಿಸಿದ್ದರು. ಆದರೂ ದಂಪತಿ ಬೋಟ್ನ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮೃತರ ಹೆಸರು, ಗುರುತು ಪತ್ತೆ ಆಗಿಲ್ಲ.
ನೀರಿನಲ್ಲಿ ತೇಲುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
kodagu,harangi dam,couple,death,boat tragidy,two children resque
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




